ವಿಜಯಪುರ : ನೋಡು ನೋಡುತ್ತಲೇ ಹೊಟೇಲೊಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ವಿಜಯಪುರ ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ.
ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದುರಂತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೂ ಕಾರಣ ತಿಳಿದು ಬಂದಿಲ್ಲ. ಸದ್ಯ ಆದರ್ಶ ನಗರ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಆಪರೇಷನ್ ಸಿಂದೂರ’ ವೇಳೆ ಬಂಕರ್‌ಗೆ ಹೋಗಲು ಸಲಹೆ ನೀಡಲಾಗಿತ್ತು: ಸತ್ಯ ಒಪ್ಪಿಕೊಂಡ ಪಾಕ್ ಅಧ್ಯಕ್ಷ



















