ಬೆಂಗಳೂರು : ನೀವು ಗುಮ್ಮಟ ಜಿಲ್ಲೆ ವಿಜಯಪುರದವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ (Tumkur Municipal Corporation Recruitment 2026) ಇರುವ 118 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 118 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ವಿಜಯಪುರ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 118
ಉದ್ಯೋಗ ಸ್ಥಳ: ವಿಜಯಪುರ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 15
ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಎಲ್ಲ ಸಮುದಾಯದವರಿಗೂ 100 ರೂಪಾಯಿ ಅರ್ಜಿ ಶುಲ್ಕವಿದೆ. ಈಗಾಗಲೇ ಪಾಲಿಕೆಯಲ್ಲಿ ವಿವಿಧ ಕೆಲಸ ಮಾಡುತ್ತಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ vijayapuracity.mrc.gov.in ಗೆ ಭೇಟಿ ನೀಡಬೇಕು.
ಪೌರ ಕಾರ್ಮಿಕ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ವಿಜಯಪುರ ಮಹಾನಗರ ಪಾಲಿಕೆ
ಕೇಂದ್ರ ಕಚೇರಿ, ಶಿವಾಜಿ ಚೌಕ್,
ವಿಜಯಪುರ, ಕರ್ನಾಟಕ – 586101.
ಇದನ್ನೂ ಓದಿ : HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್


















