ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬೆಂಬಲಿಗರ ಸಭೆ ನಡೆಯಿತು.
ಬಿಜೆಪಿಯಲ್ಲಿ ಆಂತರಿಕ ಕಲಹ ಇನ್ನೂ ಜೀವಂತವಾಗಿದೆಯೇ ಎಂಬ ಅನುಮಾನ ಇದರಿಂದ ವ್ಯಕ್ತವಾಗುತ್ತಿದೆ. ದಾವಣಗೆರೆಯಲ್ಲಿನ ಸಾಯಿ ಹೋಟೆಲ್ ನಲ್ಲಿ ಈ ನಾಯಕರ ಸಭೆ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ ಬಿ.ವೈ. ವಿಜಯೇಂದ್ರ ಅವರ ಬೆಂಬಲಿಗರು, ರಾಜ್ಯದ ಬಿಜೆಪಿ ಶಾಸಕರು ಭಾಗಿಯಾಗಿದ್ದಾರೆ.
ಬಿ.ವೈ. ವಿಜಯೇಂದ್ರ ಕೈ ಬಲಪಡಿಸಬೇಕು ಮಧ್ಯ ಕರ್ನಾಟಕದಲ್ಲಿ ಒಂದು ಸಮಾವೇಶ ನಡೆಸಬೇಕು ಎಂಬ ಉದ್ಧೇಶದಿಂದ ಈ ಸಭೆ ನಡೆಸಲಾಗುತ್ತದೆ ಎನ್ನಲಾಗುತ್ತಿದೆ.
ಸಭೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ವೈ, ಸಂಪಗಿ, ಬ್ಯಾಡಗಿ ವಿರುಪಾಕ್ಷಪ್ಪ, ರಾಣೆಬೆನ್ನೂರು ಅರುಣ್ ಕುಮಾರ್, ಕೊಳ್ಳೆಗಾಲ ಮಹೇಶ್, ಮಾನ್ವಿ ಗಂಗಾಧರ ನಾಯ್ಕ್, ಶಿವಮೊಗ್ಗ ಕುಮಾರಸ್ವಾಮಿ, ಸೀಮಾ ಮಸೂತಿ, ಬಸವರಾಜ್ ನಾಯ್ಕ್, ಮೊಳಕಾಲ್ಮುರು ತಿಪ್ಪೇಸ್ವಾಮಿ, ಕಡೂರು ಬೆಳ್ಳಿ ಪ್ರಕಾಶ್, ರಾಜಶೇಖರ್ ಶೀಲವಂತ್, ಮಸ್ಕಿ ಪ್ರತಾಪ್ ಗೌಡ ಅವರು ಭಾಗಿಯಾಗಿದ್ದಾರೆ.