ಗದಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭವಾಗಿದ್ದು, ಜನ ಬೆಂಬಲ ವ್ಯಕ್ತವಾಗಿದೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಈ ವೇಳೆ ಗದಗ ನಗರದ ಬಸವೇಶ್ವರ ಸರ್ಕಲ್ ನಿಂದ ಮಹಾತ್ಮ ಗಾಂಧಿ ವೃತ್ತದವರಿಗೆ ಮೆರವಣಿಗೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಯಾತ್ರೆ ನಡೆಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಿ.ಸಿ. ಪಾಟೀಲ್, ಶಾಸಕ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಹಲವರು ಇದ್ದರು.