ಹಾವೇರಿ : ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತದ ಬಲೆಗೆ ಬಿದ್ದಿರುವ ಘಟನೆ ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ಕಚೇರಿಯಲ್ಲಿ ನಡೆದಿದೆ. ಪಕ್ಕೀರೇಶ ಬಾರ್ಕಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.
ಪಕ್ಕೀರೇಶ ಬಸಾಪುರ ಗ್ರಾಮದ ರೈತ ಕರಿಯಲ್ಲಪ್ಪ ಕೆಸರಳ್ಳಿ ಎಂಬವರ ಬಳಿ ಖಾತೆ ಬದಲಾವಣೆಗೆ 63,000 ರೂ.ಗೆ ಬೇಡಿಕೆ ಇಟ್ಟಿದ್ದ. 30 ಸಾವಿರ ಹಣ ಮೊದಲೇ ಕೊಟ್ಟಿದ್ದರು. ಇಂದು 8,500 ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸದ್ಯ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಮಲ್ಲಿಕಾರ್ಜುನ ಮುತ್ಯಾಗೆ ಬಂಧನದ ಭೀತಿ | ಅಜ್ಞಾತ ಸ್ಥಳದಿಂದಲೇ ವಿಡಿಯೋ ರಿಲೀಸ್.. ಹೇಳಿದ್ದೇನು?



















