ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಹೊಸಾಳ ಗ್ರಾಮದ ನಾಗರಮಠದಲ್ಲಿ ಅವೈಜ್ಞಾನಿಕವಾಗಿ ಮರಳುಗಾರಿಕೆ ನಡೆಸುತ್ತಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕೃಷಿಕರು ಹಾಗೂ ಗ್ರಾಮಸ್ಥರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ತಮ್ಮ ಬೇಡಿಕೆಯನ್ನು ಈಡೇರಿಸಿ ಅವೈಜ್ಞಾನಿಕವಾಗಿ ಹಾಗೂ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಲ್ಲಿಸುವಂತೆ ಕಳೆದ ಮೂರು ದಿನಗಳಿಂದ ನಾಗರಮಠದ ಮರಳುಗಾರಿಕಾ ಪ್ರದೇಶದಲ್ಲಿ ಧರಣಿ ಪ್ರತಿಭಟನೆ ನಡೆಸಿದ್ದರು. ಆದರೆ ಅಧಿಕಾರಿಗಳಿಂದ ಸ್ಪಂದನೆ ದೊರೆಯದ ಹಿನ್ನಲೆ ಮಣಿಪಾಲದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
ಬೇಡಿಕೆ ಈಡೇರುವವರೆಗೂ ಪ್ರತಿದಿನ ಕಚೇರಿ ಅವಧಿಯಲ್ಲಿ ಅಂದರೆ ಬೆಳಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಗ್ರಾಮದ ಕೃಷಿಕರು, ಹೆಂಗಸರು, ಮಕ್ಕಳು ಸೇರಿದಂತೆ ಎಲ್ಲರೂ ಧರಣಿಯಲ್ಲಿ ಕೂರಲಿದ್ದೇವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಹೋರಾಟಗಾರ ಚಂದ್ರ ಕಾಂಚನ್ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ!



















