ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ, ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿರುವ ಅವರು ಶಿಕ್ಷೆಗೆ ತಡೆಯಾಜ್ಞೆ ಕೋರಿದ್ದು, ಈ ಕಾನೂನು ಹೋರಾಟದ ಮುಂದಿನ ಹಂತವು ತೀವ್ರ ಕುತೂಹಲ ಕೆರಳಿಸಿದೆ.
ಸೆಷನ್ಸ್ ಕೋರ್ಟ್ ಕೊಟ್ಟಿರೋ ಜೀವಾವಧಿ ಶಿಕ್ಷೆಯ ಅಮಾನತು ಹಾಗೂ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿರುವ ಈ ಅರ್ಜಿ, ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸೆಷನ್ಸ್ ಕೋರ್ಟ್ ತೀರ್ಪಿನ ಬಳಿಕ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ವಿನಯ್ ಕುಲಕರ್ಣಿ, ಇದೀಗ ಕಾನೂನು ಹೋರಾಟದ ಮೂಲಕ ನ್ಯಾಯಾಲಯದಿಂದ ಪರಿಹಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮಾತ್ರವಲ್ಲದೆ, ಸಹ ಆರೋಪಿಯಾಗಿರುವ ಚಂದ್ರಶೇಖರ್ ಇಂಡಿ ಕೂಡ ತಮ್ಮ ಮೇಲ್ಮನವಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!


















