ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ರನ್ನು ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದ್ದು, ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಹಾಗೂ ವೈದ್ಯ ಪದ್ರಿವಾಲಾ ಸ್ಪಷ್ಟನೆ ನೀಡಿದ್ದಾರೆ.
ಈ ಮೂಲಕ ಭಾರತದ ಪದಕದ ಕನಸು ಭಗ್ನವಾಗಿದೆ. ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಕಾರಣದಿಂದ ಅವರನ್ನು ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್ ಅವರನ್ನು ಪ್ಯಾರಿಸ್ ನ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿರುವ ಕ್ಲಿನಿಕ್ ನಲ್ಲಿ ದಾಖಲಿಸಲಾಗಿದೆ.
ಐಒಎ ಅಧ್ಯಕ್ಷೆ ಪಿಟಿ ಉಷಾ ಮಾತನಾಡಿ, ವಿನೇಶ್ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್ ಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ಇಡೀ ದೇಶದಿಂದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ನಾವು ವಿನೇಶ್ ಗೆ ಎಲ್ಲ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಮಾತನಾಡಿರುವ ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಮತ್ತು ತಂಡದ ವೈದ್ಯ ಪದ್ರಿವಾಲಾ, ವಿನೇಶ್ ಫೋಗಟ್ ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ.
ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್ ನ ತೂಕ ಹೆಚ್ಚಾದಾಗ ಅದನ್ನು ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನಗಳನ್ನು ಮಾಡಿತು. ಕೂದಲನ್ನು ಸಹ ಕತ್ತರಿಸಲಾಯಿತು. ಬೆಳಿಗ್ಗೆ 7ಕ್ಕೆ ತೂಕ ಮಾಡಿದಾಗ ಅವರು ನಿಗದಿಗಿಂತ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡು ಬಂದಿತ್ತು ಎಂದು ಹೇಳಿದ್ದಾರೆ.