ವಿಧಾನಪರಿಷತ್ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪತಿ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಸತೀಶ್ ಶೆಟ್ಟಿ ಸಾವನ್ನಪ್ಪಿದ್ದಾರೆ. ಸತೀಶ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಅವರ ಪತಿ ಶ್ರೀ ಸತೀಶ್ ಶೆಟ್ಟಿ ಅವರ ನಿಧನಕ್ಕೆ ಸಂತಾಪ ಕೋರುವೆ. ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.