ರಾಯ್ಪುರ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ರಾಂಚಿಯಲ್ಲಿ ನಡೆದ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ಸರಣಿ ವಶಪಡಿಸಿಕೊಳ್ಳಲು ಸಜ್ಜಾಗಿದೆ.
ರಾಂಚಿಯಲ್ಲಿ ಭಾರತದ ಪರ ವಿರಾಟ್ ಕೊಹ್ಲಿ ಶತಕ ಬಾರಿಸಿ ಹಲವು ದಾಖಲೆಗಳನ್ನು ಪುಡಿ ಪುಡಿ ಮಾಡಿದ್ದರು. ಇದೀಗ ರಾಯ್‌ಪುರದಲ್ಲಿಯೂ ದಕ್ಷಿಣ ಆಫ್ರಿಕಾ ವಿರುದ್ದ ವಿರಾಟ್ ಕೊಹ್ಲಿ ಅಬ್ಬರ ಮುಂದುವರೆದಿದ್ದು, ಮತ್ತೊಂದು ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಈ ಸೆಂಚುರಿ ಮೂಲಕ ವಿರಾಟ್ ಕೊಹ್ಲಿ ತಮ್ಮ 53ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಪೂರೈಸಿದ್ದಾರೆ. ಈ ವರ್ಷ ತವರಿನಲ್ಲಿ ನಡೆದ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಸತತ ಎರಡನೇ ಶತಕ ಗಳಿಸುವ ಮೂಲಕ ದಾಖಲೆಗಳನ್ನು ಸೃಷ್ಟಿಸಿದ್ದಾರೆ.
ಇದನ್ನೂ ಓದಿ : IND vs SA ODI | ಚೊಚ್ಚಲ ಏಕದಿನ ಶತಕ ಸಿಡಿಸಿ ಮಿಂಚಿದ ರುತುರಾಜ್ ಗಾಯಕ್ವಾಡ್



















