ಬೆಂಗಳೂರು: ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂನಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ (VITM Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆಫೀಸ್ ಅಸಿಸ್ಟಂಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ಮ್ಯೂಸಿಯಂ (VITM)
ಒಟ್ಟು ಹುದ್ದೆಗಳು: 12
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 20
ಉದ್ಯೋಗ ಸ್ಥಳ: ಕಲಬುರಗಿ, ಕೇರಳ, ಆಂಧ್ರಪ್ರದೇಶ
ಕರ್ನಾಟಕದ ಕಲಬುರಗಿ, ಕೇರಳದ ಕಲ್ಲಿಕೋಟೆ ಹಾಗೂ ಆಂಧ್ರಪ್ರದೇಶದ ತಿರುಪತಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಎಕ್ಸಿಬಿಶನ್ ಅಸಿಸ್ಟಂಟ್ ಎ, ಟೆಕ್ನಿಶಿಯನ್ ಎ ಹಾಗೂ ಆಫೀಸ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 36,220 ರೂಪಾಯಿಯಿಂದ 59,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಸಮುದಾಯದವರು 885 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು vismuseum.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.