ವಿಧಾನಪರಿಷತ್ ಚುನಾವಣೆಯ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಇ.ಸಿ. ನಿಂಗರಾಜುಗೆ ಬಿಜೆಪಿ ಕೊಕ್ ಕೊಟ್ಟಿದ್ದು, ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಮೈಸೂರು ಮೂಲದ ವಿವೇಕಾನಂದಗೆ ಮಣೆ ಇದೀಗ ಹಾಕಿದೆ.
ವಿವೇಕಾನಂದ, ಮೂಲತಃ ಮೈಸೂರಿನವರಾಗಿದ್ದು, ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜಂಗಲ್ ರೆಸಾರ್ಟ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಸದ್ಯ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಆಯ್ಕೆ ಮಾಡಿದ್ದು, ಈ ಮೂಲಕ ಹೊಸಮುಖದ ಅಭ್ಯರ್ಥಿಯಾಗಿ ವಿವೇಕಾನಂದ ಮೇ 16 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ನಾಳೆ ಬಿಜೆಪಿ ಇ.ಸಿ. ನಿಂಗರಾಜು ಅವರ ಹೆಸರನ್ನು ಅಧಿಕೃತವಾಗಿ ರದ್ದುಪಡಿಸಲಿದೆ ಎಂಬ ಮಾಹಿತಿಯೂ ಹೊರಬಿದ್ದಿದೆ.