ವಿಧಾನ ಪರಿಷತ್ತಿನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಧಾರವಾಡದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರ, ಕಲಬುರಗಿಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿ ಬೆಂಗಳೂರು ಶಿಕ್ಷಕರ ಮತ್ತು ಆಗ್ನೇಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ.
ಕಾಂಗ್ರೆಸ್ನ ನಾಲ್ವರು, ಬಿಜೆಪಿಯ ಮೂವರು ಮತ್ತು ಜೆಡಿಎಸ್ನ ಒಬ್ಬರು ಸೇರಿದಂತೆ ಒಟ್ಟು 43 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.


















