ಬೆಂಗಳೂರು : ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 139 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (VSKUB Recruitment 2026) ಹೊರಡಿಸಲಾಗಿದೆ. 139 ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 139
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 13
ಉದ್ಯೋಗ ಸ್ಥಳ: ಬಳ್ಳಾರಿ, ಕರ್ನಾಟಕ
21 ಪ್ರೊಫೆಸರ್, 40 ಅಸೋಸಿಯೇಟ್ ಪ್ರೊಫೆಸರ್, 78 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.18 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ. ಇದರೊಂದಿಗೆ ಕರ್ನಾಟಕದ ಬಳ್ಳಾರಿಯಲ್ಲಿ ವೃತ್ತಿಜೀವನ ಕೈಗೊಳ್ಳಲು ಬಯಸುವವರಿಗೆ ಭಾರಿ ಅನುಕೂಲವಾಗಲಿದೆ. ನೇಮಕಾತಿ ವೇಳೆ ಅನುಭವಕ್ಕೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ vskub.ac.inಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
To The Registrar, Vijayanagara Sri Krishnadevaraya University Bellary
ಇದನ್ನೂ ಓದಿ : ಅಜಿತ್ ಪವಾರ್ ಕೊನೆಯ ಮಾತುಗಳೇನು? ವಿಮಾನ ಪತನಕ್ಕೆ 9 ನಿಮಿಷ ಮೊದಲು ನಡೆಸಿದ್ದ ಸಂಭಾಷಣೆಯ ಆಡಿಯೋ ರಿಲೀಸ್!



















