ಉಡುಪಿ : ಜಿಲ್ಲೆಯ ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7ಗಂಟೆಯಿಂದ 9.30ರವರೆಗೆ ಆ್ಯಂಬುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದಾಗ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇರಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು108 ಆ್ಯಂಬುಲೆನ್ಸ್‌ಗೆ ಕರೆ ಮಾಡಿದಾಗ ಆ್ಯಂಬುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆ್ಯಂಬುಲೆನ್ಸ್‌ಗಳು ಕೂಡ ಸಿಗದಿದ್ದರಿಂದ ರೋಗಿಯ ಕಡೆಯವರು ವಿಶು ಶೆಟ್ಟಿ ಅವರನ್ನು ಸಂಪರ್ಕಿಸಿದ್ದಾರೆ. ವಿಶು ಶೆಟ್ಟಿ ಕೂಡ ಖಾಸಗಿ ಆ್ಯಂಬುಲೆನ್ಸ್‌ಗೆ ಸಂಪರ್ಕಿಸಿ ಸಿಗದಿದ್ದಾಗ ರೋಗಿ ತೀರ ಚಿಂತಾಜನಕ ಪರಿಸ್ಥಿತಿ ತಲುಪಿದ್ದರಿಂದ ಬೇರೆ ದಾರಿ ಕಾಣದೆ ತನ್ನ ಗೂಡ್ಸ್ ಟೆಂಪೋಗೆ ಮಂಚ ಇರಿಸಿ ಅದರ ಮುಖಾಂತರ ರೋಗಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.
ಇನ್ನೂ ವಿಶು ಶೆಟ್ಟಿ ಅಂಬಲಪಾಡಿ ಘಟನಾ ಸಂಬಂಧ ಮಾತನಾಡುತ್ತಾ ಈ ಬಗ್ಗೆ ನಾನು ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಲಿಲ್ಲ. ಈ ಘಟನೆಯಲ್ಲಿ ಕೂಡ ಎರಡುವರೆ ಗಂಟೆ ಅಂಬುಲೆನ್ಸ್ ಸಿಗದೇ ರೋಗಿ ಚಿಂತಾ ಜನಕ ಪರಿಸ್ಥಿತಿ ತಲುಪಿದ್ದು ವಿಧಿ ಇಲ್ಲದೆ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಸರಕಾರ ಜಿಲ್ಲಾಡಳಿತ ಈ ಬಗ್ಗೆ ಕ್ರಮ ತೆಗೆದುಕೊಂಡು ಸಹಕರಿಸಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
ಕಳೆದ ಒಂದು ವರ್ಷದಿಂದ 108 ಆ್ಯಂಬುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ಸಮಸ್ಯೆಗೆ ತುತ್ತಾಗಿ ನೂರಾರು ರೋಗಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ : ನೆಹರು ‘ವಂದೇ ಮಾತರಂ’ ವಿರೋಧಿಸಿದ್ದು ಏಕೆ? ಬಿಜೆಪಿ ಆರೋಪವೇನು? ಸಂಸತ್ತಿನಲ್ಲಿ ಇಂದು ನಡೆಯಲಿದೆ ಮಹತ್ವದ ಚರ್ಚೆ



















