ಬೆಂಗಳೂರು: ವಿದ್ಯಾ ಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ (ತೋಟಗಾರಿಕೆ ವಿಭಾಗ) ನೇಮಕಾತಿಗಾಗಿ (UAS Dharwad Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಅಕ್ಟೋಬರ್ 28 ಸಂದರ್ಶನ ನಡೆಯಲಿದ್ದು, ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ನೇಮಕಾತಿ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ. ಧಾರವಾಡದಲ್ಲಿ ವೃತ್ತಿಜೀವನ ಕಂಡುಕೊಳ್ಳಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಒಟ್ಟು ಹುದ್ದೆ: 03
ಹುದ್ದೆ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಉದ್ಯೋಗ ಸ್ಥಳ: ಧಾರವಾಡ
ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ಧಾರವಾಡ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎಸ್ಸಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ uasd.edu ವೆಬ್ ಸೈಟ್ ಗೆ ಭೇಟಿ ನೀಡಬಹುದು.
ನೇರ ಸಂದರ್ಶನದ ದಿನಾಂಕ, ಸಮಯ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನವು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಡೀನ್ ಆಫೀಸ್ ನಲ್ಲಿ ನಡೆಯಲಿದೆ


















