ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ (Darshan) ಮನೆಯ ಊಟ ಬೇಕೆಂದು ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಈ ಕುರಿತು ಕೋರ್ಟ ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ, ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಕೂಡ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನೀಡುತ್ತಿರುವ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಸರಿಯಾಗಿ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ.
ಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಚಿಕಿತ್ಸೆಯ ನಂತರ ಹೇಳಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ. ಈಗಾಗಲೇ ಅರ್ಜಿಯು ಕೋರ್ಟ್ ಗೆ ಸಲ್ಲಿಕೆಯಾಗಲಿದ್ದು, ಗುರುವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.
