ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ಬಸ್ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಹಿಳೆ ಗಂಭಿರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.