ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ತೊಡೆ ತಟ್ಟಿದ ರಾಜ್ಯ ಸರ್ಕಾರ

February 28, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮತ್ತೊಮ್ಮೆ ಸಮರ ಸಾರಲು ಮುಂದಾಗಿದೆ.

ದಕ್ಷಿಣ ಭಾರತದ ರಾಜ್ಯಗಳ ಜೊತೆಗೆ ಕರ್ನಾಟಕ ಮಾತುಕತೆ ನಡೆಸುತ್ತಿದ್ದು, ಲೋಕಸಭಾ ಕ್ಷೇತ್ರ ಮರು ವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ದ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಒನ್ ನೇಷನ್ ಒನ್ ಇಲೆಕ್ಷನ್ ಜಾರಿಗೆ ಈಗ ರಾಜ್ಯ ಸರ್ಕಾರ ವಿರೋಧಿಸುತ್ತಿದೆ. ಒನ್ ನೇಷನ್ ಒನ್ ಇಲೆಕ್ಷನ್ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳು ಆತಂಕ ಪಡುವುದು ಬೇಡ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೆಂಡಕಾರಿದ್ದಾರೆ.

ಈ ವಿಚಾರವಾಗಿ ಗುಡುಗಿದ ಸಿಎಂ ಸಿದ್ದರಾಮಯ್ಯ, ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ. ಕ್ಷೇತ್ರ ಮರುವಿಂಗಡಣೆ ಮೂಲಕ ದಕ್ಷಿಣದ ರಾಜ್ಯಗಳ ಜನತೆಗೆ ಕೇಂದ್ರ ಶಿಕ್ಷಿಸುವ ದುರುದ್ಧೇಶ ಹೊಂದಿದೆ. ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕು ಎಂದು ಸವಾಲು ಹಾಕಿದ್ದಾರೆ.

ಕ್ಷೇತ್ರ ಮರು ವಿಂಗಡಣೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಆತಂಕವೇನು?

ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರು ವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ. ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆಯ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಇದರಿಂದಾಗಿ ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಬಹುದು. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳಿಗೆ ಹೆಚ್ಚು ನಷ್ಟವಾಗಲಿದೆ.

ಕರ್ನಾಟಕದ ಸಂಸದರ ಸಂಖ್ಯೆ ಇಳಿಕೆ ಸಾಧ್ಯತೆ!
ಉತ್ತರದ ರಾಜ್ಯಗಳ ಸಂಸದರ ಸಂಖ್ಯೆ ಭಾರೀ ಹೆಚ್ಚಳ

ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರು ವಿಂಗಡಣೆ ನಡೆದರೆ, ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34, ಕೇರಳದ ಸಂಖ್ಯೆ 20ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80ರಿಂದ 91, ಬಿಹಾರದ ಸಂಖ್ಯೆ 40ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಈ ರೀತಿ ಆದರೆ, ಇದನ್ನು ಅನ್ಯಾಯ ಅನ್ನದೇ ಮತ್ತೇನು ಅನ್ನಬೇಕು? ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ ಒಂದೋ 1971ರ ಜನಗಣತಿಯನ್ನು ಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು. ದಕ್ಷಿಣ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಈಗ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರ ಹೂಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ದಕ್ಷಿಣ ಭಾರತದ ಉಳಿದ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಕ್ಷೇತ್ರ ಮರುವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ದ ಹೋರಾಟ ರೂಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Tags: Amit shahbangaloreBJPCongressElectionOne Nation One ElectionSiddaramaiah
SendShareTweet
Previous Post

BSNL Recruitment 2025: ಬಿಎಸ್ಸೆನ್ನೆಲ್ ನಲ್ಲಿವೆ ಹುದ್ದೆಗಳು; ಕಾನೂನು ಪದವೀಧರರಿಗೆ ಆದ್ಯತೆ

Next Post

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Next Post
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat