ದೊಡ್ಡಬಳ್ಳಾಪುರ : ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ.
ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ. ಹೀಗೆ ಎರಡು ಗುಂಪಿನ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರಿಂದ ಎನ್ಸಿಆರ್ ದಾಖಲಾಗಿದ್ದು, ಪೊಲೀಸರು ಎರಡು ಕಡೆಯವರನ್ನು ಕರೆಸಿ ಶಾಂತಿ ಸಭೆ ಮಾಡಿ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.
ಇದನ್ನೂ ಓದಿ : ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಸಿಡಿದೆದ್ದ ‘ನಿರ್ಮಾಪಕರ ಸಂಘ’.. ದೂರು ದಾಖಲು!



















