ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹಳ್ಳಿ ಗುಗ್ಗು ಎಂದಿರುವ ಪ್ರಿಯಾಂಕ್ ಖರ್ಗೆಗೆ ಪ್ರತ್ಯುತ್ತರ ನೀಡಿದ್ದಾರೆ.
ತಾವು ಸಿಎಂ ಆಗಿದ್ದಾಗ ಎರಡು ಬಾರಿ ರೈತರ ಸಾಲ ಮನ್ನಾ ಮಾಡಿದ್ದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ತಾನು ಕೆಲಸ ಮಾಡಿದ್ದೇನೆ ಎಂದಿದ್ದಾರೆ. ನನ್ನಷ್ಟು ಹಳ್ಳಿಗಳನ್ನು ಸುತ್ತಿರುವ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ಟಾಂಗ್ ಕೊಟ್ಟಿದ್ದಾರೆ.
ಗುರುಮಿಠಕಲ್ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸರಿಯಾದ ವ್ಯವಸ್ಥೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಸಿದ್ದಾರ್ಥ ಟ್ರಸ್ಟ್‌ನಲ್ಲಿ ತಂದೆ, ಮಗ ಹಾಗೂ ಅಳಿಯ ಮಾತ್ರ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಮುದಾಯದ ಒಬ್ಬ ವ್ಯಕ್ತಿಗಾದರೂ ಇವರು ಸಹಾಯ ಮಾಡಿದ್ದಾರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

















