ಬೆಂಗಳೂರಿನ ಸಾರ್ವಜನಿಕರ ಅನುಕೂಲಕ್ಕಾಗಿ ಹಮ್ಮಿಕೊಳ್ಳಲಾಗಿರುವ ‘ವಾರ್ಡ್ ಒನ್’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಜಿಬಿಎ, ಬೆಸ್ಕಾಂ, ಬಿಡಬ್ಲ್ಯೂಎಸ್ಎಸ್ಬಿ, ಬಿಎಂಆರ್ಸಿಎಲ್, ಬಿಡಿಎ, ಪೊಲೀಸ್, ಬಿಎಂಟಿಸಿ ಹಾಗೂ ಅರಣ್ಯ ಮತ್ತು ತೋಟಗಾರಿಕಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ವಾರ್ಡ್ನಲ್ಲೇ ಕುಡಿಯುವ ನೀರು, ರಸ್ತೆ ಗುಂಡಿ, ಒಳಚರಂಡಿ, ಪಾರ್ಕ್, ಬಸ್ ನಿಲ್ದಾಣ, ಟ್ರಾಫಿಕ್, ಮಳೆನೀರು ಅವಾಂತರ ಹಾಗೂ ಹಳೆಯ ಮರಗಳ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗುತ್ತಿದ್ದು, ನವೆಂಬರ್ ತಿಂಗಳ ಅಂತ್ಯದವರೆಗೆ ಸಾರ್ವಜನಿಕರು ತಮ್ಮ ವಾರ್ಡ್ ವ್ಯಾಪ್ತಿಯ ಯಾವುದೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.


















