ಯಾವುದೇ ಕಾರಣಕ್ಕೂ ಕಮಲ್ ಹಾಸನ್ ನಟನೆಯ ಚಿತ್ರಗಳನ್ನು ಬಿಡುಗಡೆ ಮಾಡಬಾರದು ಎಂದು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಕೋರಮಂಗಲದ ಪಿವಿಆರ್ ಚಿತ್ರ ಮಂದಿರಕ್ಕೆ ತೆರಳಿ ಮನವಿ ಮಾಡಿದ್ದಾರೆ.
ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ನೇತೃತ್ವದಲ್ಲಿ ಕೋರಮಂಗಲ ಪಿವಿಆರ್ ಸಿಇಓಗೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಕಮಲ್ ಹಾಸನ್ ನಟನೆಯ ಚಿತ್ರ ರಿಲೀಸ್ ಮಾಡಬಾರದು. ಒಂದು ವೇಳೆ ರಿಲೀಸ್ ಮಾಡಿದರೆ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದೇವೆಂದು ಕಾರ್ಯಕರ್ತರು ಹೇಳಿದ್ದಾರೆ.