ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಗುಡುಗು-ಮಿಂಚು ಸಹಿತ ವರ್ಷಧಾರೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ರಾಜಧಾನಿಯ ಹಲವೆಡೆ ದೊಡ್ಡ ಮಳೆಯಾಗೋ ನಿರೀಕ್ಷೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬಿಸಿಲ ಬೇಗೆಯಲ್ಲಿ ಬೆಂದವರಿಗೆ ಈ ಮಳೆ ತಂಪು ನೀಡುವ ನಿರೀಕ್ಷೆಯಿದೆ. ಧಾರವಾಡ-ಹುಬ್ಬಳ್ಳಿ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ ಸೇರಿ ಮಧ್ಯ ಕರ್ನಾಟಕದ ಹಲವೆಡೆ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.