ಪುತ್ತೂರು: ಇತ್ತೀಚೆಗೆ ಬಾಲಕನೋರ್ವ ನಾಪತ್ತೆಯಾಗಿರುವ ಘಟನೆ ಪಟ್ಟಣದಲ್ಲಿ ನಡೆದಿತ್ತು. ಆದರೆ, ಇದುವರೆಗೂ ಬಾಲಕ ಪತ್ತೆಯಾಗದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.
ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಾಪತ್ತೆಯಾದ ಬಾಲಕನನ್ನು ತಕ್ಷಣವೇ ಪೋಲೀಸರು ಪತ್ತೆ ಹಚ್ಚಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಮುಖಂಡರು, ಬಿಜೆಪಿ ನಾಯಕರಿಗೆ ಭದ್ರತೆಯಿಲ್ಲದಂತಾಗಿದೆ. ಪರಂಗಿಪೇಟೆ ಪರಿಸರದಲ್ಲಿ ಗಾಂಜಾ ಮಾಫಿಯಾ ಹೆಚ್ಚಾಗಿದೆ. ಈ ಹಿಂದೆಯೂ ಇಲ್ಲಿ ಬಿಜೆಪಿ ಮುಖಂಡನಿಗೆ ಮಾರಣಾಂತಿಕ ಹಲ್ಲೆಯಾಗಿತ್ತು. ಇದೀಗ ಮತ್ತೆ ಬಾಲಕ ನಾಪತ್ತೆಯಾಗಿ ಐದು ದಿನಗಳು ಕಳೆದಿವೆ. ಎರಡು ದಿನಗಳಲ್ಲಿ ಬಾಲಕನ ನಾಪತ್ತೆ ಪ್ರಕರಣ ಭೇದಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕಿಡಿ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಹಬ್ಬಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.