ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್, ಉಡುಪಿ, ದಕ್ಷಿಣ ಕನ್ನಡ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಪ್ರಮಾಣಕ್ಕಿಂತಲೂ ಕಡಿಮೆಯಾಗಿದ್ದು, ಜನ ನೆಮ್ಮದಿಯ ಉಸಿರುವ ಬಿಡುವಂತಾಗಿತ್ತು. ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 28ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.