ಇ ಖಾತ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಅಧಿಕಾರಿಗಳಿಗೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಅಯುಕ್ತ ಮುನೀಶ್ ಮೌದ್ಗಿಲ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಇ ಖಾತ ನೀಡಲು ಅಧಿಕಾರಿಗಳು ಹಣದ ಬೇಡಿಕೆ ಇಡುತ್ತಿದ್ದರು ಎಂದು ಸಾರ್ವಜನಿಕರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಾರ್ನಿಂಗ್ ಮಾಡಿ ಅದೇಶ ನೀಡಲಾಗಿದೆ.
ರಾಜಕೀಯ ವ್ಯಕ್ತಿಗಳಿಗೆ, ಗಣ್ಯರಿಗೆ ಮಾತ್ರ ಬೇಗ ಬೇಗ ಇ ಖಾತೆ ಸಿಗುತ್ತಿವೆ. ಇನ್ನುಳಿದವರು ಇ ಖಾತಾಗೆ ಅರ್ಜಿ ಸಲ್ಲಿಸಿದರೆ ಅಧಾರ್ ಕಾರ್ಡ್, ಆಸ್ತಿ ಫೋಟೋ, ಮನೆ ನಂಬರ್ ಸರಿಯಿಲ್ಲ ಎಂದು ಸುಳ್ಳು ಹೇಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ಅನೇಕ ದೂರುಗಳು ಬಂದಿವೆ. ಅಧಿಕಾರಿಗಳೇ ಕಾನೂನು ಬಾಹಿರ ಕಾರ್ಯದಲ್ಲಿ ತೊಡಗಿದರೆ ಹೇಗೆ ಎಂದು ವಾರ್ನಿಂಗ್ ಮಾಡಿದ್ದಾರೆ. ಒಂದು ವೇಳೆ ಇದನ್ನು ತಿರಸ್ಕರಿಸಿ ಮತ್ತೆ ಹಳೆಯ ಚಾಳಿ ಮುಂದುವರೆಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.