ಬೆಂಗಳೂರು: ರೌಡಿಶೀಟರ್ ಆಯೋಜಿಸಿದ್ದ ಹುಟ್ಟುಹಬ್ಬದ ಪಾರ್ಟಿಯನ್ನು ಪ್ರಶ್ನಿಸಲು ಹೋದ ಪೊಲೀಸರೊಂದಿಗೆ ಗಲಾಟೆ ನಡೆದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾಜಿ ರೌಡಿಶೀಟರ್ ಅನಿಲ್ ಅಲಿಯಾಸ್ ‘ಬೋರ್‌ವೆಲ್’ ಅನಿಲ್ ಹುಟ್ಟುಹಬ್ಬದ ಅಂಗವಾಗಿ ಪಾರ್ಟಿ ಆಯೋಜಿಸಿದ್ದಾನೆ ಎನ್ನಲಾಗಿದೆ.
ಪಾರ್ಟಿಯಲ್ಲಿ ಅಕ್ರಮವಾಗಿ ಮದ್ಯ ಸೇವನೆ ನಡೆಯುತ್ತಿದ್ದು, ಹಲವು ರೌಡಿಶೀಟರ್‌ಗಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಪರಿಶೀಲನೆ ನಡೆಸಲು ಮುಂದಾಗಿದೆ.
ಪೊಲೀಸರು ಆಗಮಿಸಿದ ವಿಚಾರ ತಿಳಿದ ಕೆಲವರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಅನಿಲ್ ಹಾಗೂ ಆತನ ಬೆಂಬಲಿಗರು ಪೊಲೀಸರ ತಪಾಸಣೆಯನ್ನು ಪ್ರಶ್ನಿಸಿ ವಾಗ್ವಾದಕ್ಕಿಳಿದಿದ್ದಾರೆ. ಬಳಿಕ ಗಲಾಟೆ ಉಂಟಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ


















