ಬೆಳಗಾವಿ : ಚಿಕ್ಕೋಡಿಯಲ್ಲಿ ತಡರಾತ್ರಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಗಡಿನಾಡು ಶಕ್ತಿ ದೇವತೆ ಯಲ್ಲಮ್ಮ ದೇವಿ ದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ.

ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲ್ಲಮ್ಮವಾಡಿ ಕ್ಷೇತ್ರವನ್ನು ಸಂಪೂರ್ಣ ಮಳೆ ನೀರು ಆವರಿಸಿಕೊಂಡಿದೆ. ಯಲ್ಲಮ್ಮ ದೇವಿಯ ಮೂಲ ವಿಗ್ರಹ ಅರ್ಧದಷ್ಟು ಮುಳುಗಡೆಯಾಗಿದೆ.
ಇನ್ನು, ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಭಕ್ತರು ದರ್ಶನಕ್ಕೆ ಆಗಮಿಸುತ್ತಿದ್ದಾರೆ. ರಭಸವಾಗಿ ಹರಿಯುತ್ತಿರುವ ನೀರಿನ ಮಧ್ಯದಲ್ಲೇ ದೇವಿಯ ದರ್ಶನ ಪಡೆಯುತ್ತಿದ್ದಾರೆ.



















