ಮೈಸೂರು: ಸಿಎಂ ತವರು ಕ್ಷೇತ್ರದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿನ ಜನರು ಸರಿಯಾಗಿ ಕುಡಿಯುವ ನೀರು ಸರಬರಾಜು ಮಾಡದ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ನೀರು ಸರಬರಾಜು ಆಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಗ್ರಾಮ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಗ್ರಾಪಂ ಸಿಬ್ಬಂದಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಹಲವು ಬಾರಿ ಕುಡಿಯುವ ನೀರಿಗಾಗಿ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ, ಮಹಿಳೆಯರು ಪಂಚಾಯಿತಿಗೆ ಬೀಗ ಜಡಿದು, ನೀರಿನ ವ್ಯವಸ್ಥೆ ಕಲ್ಪಿಸುವವರೆಗೂ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಕೆಟ್ಟು ನಿಂತಿರುವ ಬೋರ್ ವೆಲ್ ಗಳನ್ನು ಸರಿ ಮಾಡಿಸಿ ಎಂದು ಮನವಿ ಮಾಡಿದರು.