ನವದೆಹಲಿ: ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಲ್ಲಿನ (Delhi) ಕೋಚಿಂಗ್ ಸೆಂಟರ್ (Coaching Centre) ನ ನೆಲಮಾಳಿಗೆಗೆ ಪ್ರವಾಹದ ನೀರು ಹಠಾತ್ ಆಗಿ ನುಗ್ಗಿದ ಪರಿಣಾಮ 3 ವಿದ್ಯಾರ್ಥಿಗಳು (Students) ಸಾವನ್ನಪ್ಪಿದ್ದಾರೆ. ರಾಜೇಂದ್ರ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಸಂಪೂರ್ಣವಾಗಿ ಜಲಾವೃತವಾಗಿತ್ತು. ಪರಿಣಾಮ ವಿದ್ಯಾರ್ಥಿಗಳು ನೆಲ ಮಾಲಿಗೆಳಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಐದು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿತ್ತು. ಆದರೆ ಮೂವರು ವಿದ್ಯಾರ್ಥಿಗಳು ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 7 ಅಡಿಯಷ್ಟು ನೀರಿದ್ದು, ನೀರನ್ನು ಪಂಪ್‌ಸೆಟ್ ಮೂಲಕ ಹೊರಗೆ ಹಾಕಲಾಗುತ್ತಿದೆ. ಅಲ್ಲದೇ, ನೆಲಮಾಳಿಗೆಯಿಂದ 30 ವಿದ್ಯಾರ್ಥಿಗಳು ಪಾರಾಗಿದ್ದಾರೆ. ಮೂವರು ಮಾತ್ರ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಬನ್ಸುರಿ ಸ್ವರಾಜ್ ಅವರು, ದುರಂತವನ್ನು ತಪ್ಪಿಸಬಹುದಿತ್ತು ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರನ್ನು ಪದೇ ಪದೇ ಈ ಪ್ರದೇಶದಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸಿ ಹೂಳು ತೆಗೆಯುವಂತೆ ಮನವಿ ಮಾಡಿದ್ದರು. ಆದರೆ, ಆ ಕಾರ್ಯ ನಡೆಯದಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ.