ಶಿವಮಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆಯಾದ ಹಿನ್ನಲೆಯಲ್ಲಿ ವಾರಾಹಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕೆಪಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮುನ್ಸೂಚನೆ ನೀಡಿದ್ದಾರೆ.
ಮಾಣಿ ಜಲಾಶಯದ ಗರಿಷ್ಠ ನೀರಿನ ಮಟ್ಟ 594.36ಮೀ. ಈಗಾಗಲೇ ಜಲಾಶಯದ ನೀರಿನ ಮಟ್ಟ,588.26 ಮೀಟರ್ ತಲುಪಿದೆ. ಜಲಾಶಯದಲ್ಲಿ 5087 ಸಾವಿರ ಕ್ಯೂಸೆಕ್ ಒಳ ಹರಿವು ಇದೆ.
ಇದೇ ರೀತಿ ಒಳ ಹರಿವು ಮುಂದುವರೆದರೆ ಜಲಾಶಯದ ನೀರಿನ ಮಟ್ಟ ಶೀಘ್ರ ಗರಿಷ್ಠ ಮಟ್ಟಕ್ಕೆ ತಲುಪಲಿದ್ದು, ನೀರಿನ ಮಟ್ಟ 590 ಮೀಟರ್ ತಲುಪಿದ ತಕ್ಷಣ ನೀರು ಹೊರ ಬಿಡಲಾಗುತ್ತದೆ.
ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಸಂದರ್ಭದಲ್ಲಿ ಜಲಾಶಯದ ನೀರನ್ನು ಗೇಟ್‌ಗಳ ಮೂಲಕ ಹೊರ ಬಿಡುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನರಿಗೆ ಹಾಗೂ ಪ್ರವಾಸಿಗರಿಗೆ ನದಿಗೆ ಇಳಿಯದಂತೆ ಕರ್ನಾಟಕ ವಿದ್ಯುತ್ ನಿಗಮದಿಂದ ಎಚ್ಚರಿಕೆ ನೀಡಲಾಗಿದೆ.