ದಾವಣಗೆರೆ : ಬೇಸಿಗೆ ಪ್ರಾರಂಭವಾಗುವ ಮುನ್ನವೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನೀರಿಗಾಗಿ ತಾಲೂಕು ಪಂಚಾಯತಿ ಮುಂಭಾಗದಲ್ಲಿ ಬಿಂದಿಗೆ ಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಕಳೆದ 8-9 ತಿಂಗಳಿನಿಂದ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ವಾರಕ್ಕೆ ಒಮ್ಮೆ ನೀರು ಬಿಡುತ್ತಿರುವ ಗ್ರಾಮ ಪಂಚಾಯತ ಸಿಬ್ಬಂದಿ ಕೇವಲ ಎರಡು ಗಂಟೆ ಮಾತ್ರ ನೀರು ಬಿಡುತ್ತಿದ್ದಾರೆ.
40 ಮನೆಗೆ ಒಂದು ನಲ್ಲಿ ಇರುವ ಹಿನ್ನೆಲೆ ನಿತ್ಯ ಗ್ರಾಮಸ್ಥರು ನೀರಿಗಾಗಿ ಜಗಳ ಮಾಡುತ್ತಿದ್ದು, ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ತಾಲೂಕು ಪಂಚಾಯತಿ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ಮಾಡಿ, ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಆಗ್ರಹಿಸಿ, ಕೂಡಲೇ ನೀರಿನ ವ್ಯವಸ್ಥೆ ಸರಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ : ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!



















