ಕೇರಳದ ವಯನಾಡು ಭೂ ಕುಸಿತ ದುರಂತಕ್ಕೆ ಇಡೀ ಜಗತ್ತೇ ಮಮ್ಮಲ ಮರಗುತ್ತಿದೆ. ಈ ಘಟನೆಯಲ್ಲಿ 350ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇನ್ನೂ 300ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಸಾವಿರಾರು ಜನರು ಮನೆ- ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಈ ಘಟನೆಯ ನಿರಾಶ್ರಿತರಿಗೆ ಸಹಾಯ ಮಾಡುವುದಕ್ಕಾಗಿ ಈಗ ಎಲ್ಲರೂ ಮುಂದಾಗಿದ್ದಾರೆ. ಸೆಲೆಬ್ರಿಟಿಗಳು, ಸಂಘ- ಸಂಸ್ಥೆಗಳು ಸೇರಿದಂತೆ ಸಾಮಾನ್ಯರೂ ಕೈಲಾದಷ್ಟು ದೇಣಿಗೆ ನೀಡುತ್ತಿದ್ದಾರೆ. ಈಗ ಫ್ಯಾನ್ ಇಂಡಿಯಾ ನಟ ಅಲ್ಲು ಅರ್ಜನ್ ಬರೋಬ್ಬರಿ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಶ್ಮಿಕಾ ಮಂದಣ್ಣ, ಮೋಹನ್ ಲಾಲ್, ಸೂರ್ಯ, ಜ್ಯೋತಿಕಾ, ಕಾರ್ತಿ, ವಿಕ್ರಮ್ ಸೇರಿದಂತೆ ಅನೇಕ ಕಲಾವಿದರು ದೇಣಿಗೆ ನೀಡಿದ್ದಾರೆ. ಈ ಸಾಲಿಗೆ ಈಗ ಅಲ್ಲು ಅರ್ಜುನ್ ಸೇರಿದ್ದಾರೆ. ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಲ್ಲು ಅರ್ಜುನ್ ಹಣವನ್ನು ನೀಡಿದ್ದಾರೆ. ದಾನಿಗಳು ನೀಡಿರುವ ಅವರು ನೀಡಿರುವ ಹಣವನ್ನು ಸಂತ್ರಸ್ತರಿಗೆ ವಿವಿಧ ರೀತಿಯ ಸೌಕರ್ಯಗಳನ್ನು ನೀಡಲು ಸರ್ಕಾರ ಬಳಕೆ ಮಾಡುತ್ತದೆ.
ವ್ಯಾಪಕವಾಗಿ ಸುರಿಯುತ್ತಿರುವ ಭೀಕರ ಮಳೆಗೆ ಹಲವು ಕಡೆಗಳಲ್ಲಿ ದುರಂತ ಸಂಭವಿಸಿದೆ. ಪ್ರವಾಹ ಮತ್ತು ಭೂಕುಸಿತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹೆಚ್ಚು ಆಘಾತ ಸೃಷ್ಟಿಸಿದ್ದು ವಯನಾಡು ಭೂಕುಸಿತ, ಹೆಚ್ಚು ಜನರ ಸಾವಿಗೆ ಕಾರಣವಾಗಿದೆ. ಜುಲೈ 30ರಂದು ಭೂಕುಸಿತ ಉಂಟಾಯಿತು. ಇದರಿಂದ ನೂರಾರು ಕುಟುಂಬಗಳು ನಾಶವಾಗಿವೆ. 200ಕ್ಕೂ ಅಧಿಕ ಜನರು ನಾಪತ್ತೆ ಆಗಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ 10 ಲಕ್ಷ ರೂಪಾಯಿ ರೂಪಾಯಿ ದೇಣಿಗೆ ನೀಡಿದ್ದರು. ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಮೋಹಲ್ಲಾಲ್ 3 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.