ಬೆಂಗಳೂರು : ರಾಜ್ಯ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 171 ಹುದ್ದೆಗಳ ನೇಮಕಾತಿಗಾಗಿ (WCD Karnataka Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 171 ಮಹಿಳಾ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಒಟ್ಟು ಹುದ್ದೆಗಳು: 171
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 28
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕಲ್ಯಾಣ ಕರ್ನಾಟಕದಲ್ಲಿ 30 ಹಾಗೂ ಉಳಿದ ಎಲ್ಲ ಕಡೆ 141 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 18ರಿಂದ 40 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 83 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://cetonline.karnataka.gov.in/FWCD_RECR_2026/login ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಬೇಕು.



















