ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿರುವ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೋಲಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗಾಗಿ (WCD Kolar Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಕೋಲಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಒಟ್ಟು ಹುದ್ದೆಗಳು: 278
ಉದ್ಯೋಗ ಸ್ಥಳ: ಕೋಲಾರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 22
19ರಿಂದ 35 ವರ್ಷದೊಳಗಿನ ಹೆಣ್ಣುಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 229 ಅಂಗನವಾಡಿ ಸಹಾಯಕಿಯರು ಹಾಗೂ 49 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://karnemakaone.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಓದಿಕೊಂಡು ಎಲ್ಲ ದಾಖಲೆ ಸಿದ್ಧಪಡಿಸಬೇಕು
ಆನ್ ಲೈನ್ ಅರ್ಜಿಯನ್ನು ಯಾವುದೇ ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿ ಇಟ್ಟುಕೊಳ್ಳಬೇಕು


















