ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದ ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯುವ ದಿಸೆಯಲ್ಲಿ ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 340 ಅಂಗನವಾಡಿ ಕಾರ್ಯಕರ್ತೆಯರು (WCD Raichur Recruitment 2026) ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಯಚೂರು
ಒಟ್ಟು ಹುದ್ದೆಗಳು: 340
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 7
ದೇವದುರ್ಗ, ಲಿಂಗಸುಗೂರು, ಮಾನ್ವಿ, ರಾಯಚೂರು, ಸಿಂಧನೂರು, ಶಿರವಾರ ಸೇರಿ ಹಲವೆಡೆ ಖಾಲಿ ಇರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 19ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ದೇಶೀಯ ನಿರ್ಮಿತ ‘ಧ್ರುವ್64’ ಚಿಪ್ ಅನಾವರಣ ; ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಮಹತ್ವದ ಮೈಲಿಗಲ್ಲು!



















