ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದು, ಶಿವಮೊಗ್ಗ ಜಿಲ್ಲೆಯವರಾ? ಹಾವೇರಿಯಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಶಿವಮೊಗ್ಗದಲ್ಲಿ ಖಾಲಿ ಇರುವ 544 ಅಂಗನವಾಡಿ ಕಾರ್ಯಕರ್ತೆಯರು (WCD Shivamogga Recruitment 2025) ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿವಮೊಗ್ಗ
ಒಟ್ಟು ಹುದ್ದೆಗಳು: 544
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 15
59 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 485 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಭದ್ರಾವತಿಯಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ: ಕಾನೂನು ವಿಶ್ವವಿದ್ಯಾಲಯದಲ್ಲಿ 21 ಸಹಾಯಕ ಪ್ರಾಧ್ಯಾಪಕರ ನೇಮಕ : ಹೀಗೆ ಅರ್ಜಿ ಸಲ್ಲಿಸಿ



















