ಬೆಂಗಳೂರು: ನೀವು ತುಮಕೂರು ಜಿಲ್ಲೆಯವರಾಗಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 946 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿಗಾಗಿ (WCD Tumkur Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತುಮಕೂರು
ಒಟ್ಟು ಹುದ್ದೆಗಳು: 946
ಉದ್ಯೋಗ ಸ್ಥಳ: ತುಮಕೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 09
ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತಿಪಟೂರು, ತುಮಕೂರು ನಗರ, ತುಮಕೂರು ಗ್ರಾಮೀಣ, ತುರುವೇಕೆರೆಯಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 19ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು



















