ಬೆಂಗಳೂರು: ನೀವು ಯಾದಗಿರಿ ಅಥವಾ ನಗರದ ಆಸುಪಾಸಿನವರಾ? ನೀವು ಯಾದಗಿರಿಯಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಯಾದಗಿರಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (WCD Yadgir Recruitment 2025) ಖಾಲಿ ಇರುವ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿ
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಯಾದಗಿರಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 05
ಹುದ್ದೆ ಹೆಸರು: ಬ್ಲಾಕ್ ಕೋ-ಆರ್ಡಿನೇಟರ್
ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 21 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೌಶಲ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ yadgir.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅರ್ಜಿ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy Director, Women and Child Development Department, Yadgir, Room No.: C-17, First Floor, District Administration Building Complex, Chittapur Road, Yadgir – 585202.
ಇದನ್ನೂ ಓದಿ : ಉರಿ ಜಲವಿದ್ಯುತ್ ಸ್ಥಾವರದ ಮೇಲೆ ಪಾಕ್ ನಡೆಸಿದ್ದ ದಾಳಿ ವಿಫಲ : 250ಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿದ ಸಿಐಎಸ್‌ಎಫ್ ವೀರರು


















