ಕಲಬುರಗಿ: ಕೇಂದ್ರ ಸರ್ಕಾರ ಯುದ್ಧದ ವಿಷಯದಲ್ಲಿ ಯಾವುದೇ ತೀರ್ಮಾನ ಕೈಗೊಂಡರೂ ಅವರ ಹಿಂದೆ ನಾವಿರುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಈ ವಿಷಯದಲ್ಲಿ ಕೇಂದ್ರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ನಮ್ಮ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರ ಜೊತೆ ನಾವು ಇರುತ್ತೇವೆ. ಕೇಂದ್ರ ಯಾವುದೇ ತೀರ್ಮಾನ ಬೇಕಾದರೂ ತೆಗೆದುಕೊಳ್ಳಲಿ ಎಂದಿದ್ದಾರೆ.
ವಕ್ಫ್ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಮುಸ್ಲಿಂರು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಕೇಂದ್ರ ಸರ್ಕಾರದ ಕಾಯ್ದೆಗೆ ವಿರೋಧಿಸಿ ನಮ್ಮ ಪಕ್ಷ ನಿರ್ಣಯ ಕೈಗೊಂಡಿದೆ. ಸದ್ಯ ಈ ವಿಷಯ ಕೋರ್ಟ್ ನಲ್ಲಿದೆ. ನಮಗೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದಿದ್ದಾರೆ.