ಸಿಯೋಲ್ : ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಯುತ್ತಿದೆ. ಅಮೆರಿಕವು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ಇಂದು ನಡೆದ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಸಿಇಒ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗೆ ಅಪಾರ ಗೌರವ ಮತ್ತು ಪ್ರೀತಿ ಇದೆ ಎಂದು ಹೇಳಿದರು. ಇದನ್ನೂ ಓದಿ : ‘ಕಡಲ ಮಕ್ಕಳಿ’ಗೆ ಭರ್ಜರಿ ಮತ್ಸ್ಯ ಬೇಟೆ | ಕಾರವಾರದಲ್ಲಿ ಬಲೆಗೆ ಬಿದ್ದ ರಾಶಿ ರಾಶಿ ಭೂತಾಯಿ ಮೀನು!
ನೀವು ಭಾರತ ಮತ್ತು ಪಾಕಿಸ್ತಾನವನ್ನು ನೋಡಿ. ನಾನು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ. ನಿಮಗೆ ತಿಳಿದಿರುವಂತೆ, ಆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರೊಂದಿಗೆ ನಮಗೆ ಉತ್ತಮ ಸಂಬಂಧವಿದೆ ಎಂದರು.
ವ್ಯಾಪಾರ ಒಪ್ಪಂದದ ಬಗ್ಗೆ ಹೆಚ್ಚಿನ ವಿವರಣೆ ನೀಡಲಿಲ್ಲವಾದರೂ, ನಡೆಯುತ್ತಿರುವ ಮಾತುಕತೆಗಳು ಫಲಪ್ರದವಾಗುವ ಸಾಧ್ಯತೆ ಇದೆ ಎಂಬುದರ ಸುಳಿವು ನೀಡಿದರು.



















