ನಾನು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ. ಪಕ್ಷದವರು ಏನು ಹೇಳಿದ್ದಾರೆಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ನಾನು ಮುಖ್ಯಮಂತ್ರಿಗಳ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಅವರೇ ಉತ್ತರಿಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕೆಂಪೇಗೌಡ ಏರ್ಪೋಟ್ ನಲ್ಲಿ ವರದಿಗಾರರಿಗೆ ಸ್ಪಂದಿಸಿದ ಡಿಕೆಶಿ, ಸಿಎಂ ಮಾತನಾಡಿದ ಮೇಲೆ ಪದೇ ಪದೆ ನಾನು ಮಾತನಾಡುವುದು ಸರಿಯಲ್ಲ. ಅಧಿಕಾರ ಹಂಚಿಕೆ ಬಗ್ಗೆ ನಮಗೇ ಗಾಭರಿ ಇಲ್ಲ. ನಿಮಗೆ ಯಾಕೆ ಎಂದು ಅವರು ಮರು ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಸಾಕಷ್ಟು ಬೆಂಬಲಿಗರಿಗೆ ಆಸೆ ಇದೆ. ಎಲ್ಲರಿಗೂ ಆಸೆಗಳು ಇರುತ್ತದೆ ಈ ಬಗ್ಗೆ ನಾನು ಸದ್ಯಕ್ಕೆ ಮಾತನಾಡಲ್ಲ. ಕಾಮೆಂಟ್ ಮಾಡುವ ಅವಶ್ಯಕತೆ ನನಗಿಲ್ಲ. ಮಾತನಾಡುವವರೇ ಎಲ್ಲಾ ಪ್ರಶ್ನೆಗಳನ್ನು ಮತ್ತು ಉತ್ತರಗಳನ್ನ ಅವರೇ ಕೊಡುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.



















