ನವದೆಹಲಿ: ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ(ಐಎಎಫ್) ಹೇಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (Narednra Modi) ಕೂಡ ಖಡಕ್ ಸಂದೇಶ ನೀಡಿದ್ದಾರೆ.
ಪಾಕ್ ಮತ್ತೆ ದಾಳಿ ನಡೆಸಿದರೆ ತಿರುಗೇಟು ನೀಡುತ್ತೇವೆ ಎಂದು ಮೋದಿ, ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ಹೇಳಿದ್ದಾರೆ. ಪಾಕಿಸ್ತಾನದಿಂದ ಗುಂಡು ಹಾರಿಸಿದರೆ, ಇಲ್ಲಿಂದಲೂ ಗುಂಡು ಹೋಗುತ್ತೆ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆದುಕೊಳ್ಳುವುದೇ ಈಗ ಉಳಿದಿರುವ ಒಂದೇ ವಿಷಯ. ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕಿಸ್ತಾನ ಭಯೋತ್ಪಾದಕರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ, ನಾವು ಸಹ ಮಾತನಾಡಬಹುದು. ನಮಗೆ ಬೇರೆ ಯಾವುದೇ ವಿಷಯದ ಉದ್ದೇಶವಿಲ್ಲ. ನಾವು ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಮತ್ತು ಭಾರತಕ್ಕೆ ಅದರ ಅಗತ್ಯವು ಇಲ್ಲ ಎಂದು ಪ್ರಧಾನಿ ಹೇಳಿದ್ದಾರೆ ಎನ್ನಲಾಗಿದೆ.
ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಪ್ರಧಾನಿ ಮೋದಿ, ಫೋನ್ ಮೂಲಕ ಜೆ.ಡಿ.ವ್ಯಾನ್ಸ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕಿಸ್ತಾನ ದಾಳಿ ಮಾಡಿದರೆ, ಭಾರತ ಪ್ರತಿದಾಳಿ ನಡೆಸಲಿದೆ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಗೆ ಮೋದಿ ತಿಳಿಸಿದ್ದಾರೆ.