ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ , ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನು ಪ್ರಸ್ತಾಪಿಸಿದ ಅವರು, ಹೈದರಾಬಾದ್ ಅಂತಹ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಪ್ರತಿಪಾದಿಸಿದರು.”ಹೈದರಾಬಾದ್ ಅನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ ಎಂದಿದ್ದಾರೆ.
ನಮ್ಮ ಸ್ಪರ್ಧೆ ಏನಿದ್ದರೂ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳ ಜೊತೆಗೆ,” ಎಂದು ಅವರು ಘೋಷಿಸಿದ್ದಾರೆ.ಇದೀಗ ಈ ಹೇಳಿಕೆ ಕನ್ನಡಿಗರ ಮತ್ತು ಕರ್ನಾಟಕದ ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ : ಪಂಚ ಪಾಲಿಕೆಗಳ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ



















