ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ತೆರಿಗೆ ನೋಟಿಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರವು ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ನೀಡಿ, ಇದೀಗ ಸಂಬಂಧ ಇಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ. ಜಿಎಸ್ ಟಿನಲ್ಲಿ ಕೇಂದ್ರ ಸರ್ಕಾರದ ಅಡಿಯ ಸಿಜಿಎಸ್ ಟಿ ಹಾಗೂ ರಾಜ್ಯ ಸರ್ಕಾರದಡಿಯ ಎಸ್ ಜಿಎಸ್ ಟಿ ಎಂಬ ಎರಡು ಭಾಗಗಳಿರುತ್ತವೆ. ಸದ್ಯ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.
ಜಿಎಸ್‌ಟಿ ಕೌನ್ಸಿಲ್ ನಲ್ಲಿ ತೀರ್ಮಾನ ತಗೆದುಕೊಳ್ಳುವ ಮಹತ್ವದ ಪಾತ್ರ ಇರುವುದು ರಾಜ್ಯ ಸರ್ಕಾರಗಳಿಗೆ. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಹೀಗಾಗಿ ಈ ನೋಟಿಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.