ಬೆಂಗಳೂರು : ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ವಿವಿಧ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಬೆನ್ನಲ್ಲೇ ಧಾರವಾಡ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸೋದಾಗಿ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಗೃಹಸಚಿವ ಪರಮೇಶ್ವರ್, ಸರ್ಕಾರದ ಆದೇಶ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಸಂಬಂಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೇಲ್ಮನವಿ ಸಲ್ಲಿಸಲು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!


















