ಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಉಳಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಗ್ರೀನ್ ಅಲರ್ಟ್ ಘೋಷಣೆ ಮಾಡಿದೆ.
ಆದಾಗ್ಯೂ ಕೊಪ್ಪಳ, ಗದಗ, ಧಾರವಾಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


















