ಬೆಂಗಳೂರು : ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಶಾಸಕರು, ಸಚಿವರೊಂದಿಗೆ ಸಿಎಂ ಸಭೆ ನಡೆಸುತ್ತಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಶಾಸಕ ಅಜಯ್ ಧರ್ಮಸಿಂಗ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಾಧ್ಯಮರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಸಭೆ ಕರೆದಿದ್ದಾರೆ, ನಮ್ಮ ಅಹವಾಲು ಕೇಳಿದ್ದಾರೆ. ಕಲ್ಯಾಣ ಕರ್ನಾಟಕದ ಯೋಜನೆ ಹೊರತಾಗಿ, ಬೇರೆ ಬೇರೆ ಯೋಜನೆ ಬಗ್ಗೆಯೂ ಬೇಡಿಕೆ ಇಡುತ್ತೇನೆ. ನಮ್ಮ ಕ್ಷೇತ್ರಕ್ಕೆ ಸಿಎಂಗೆ ಆಹ್ವಾನಿಸುತ್ತೇವೆ. ಉಸ್ತುವಾರಿ ಸಚಿವರು ಇಲ್ಲಿಯೆ ಇದ್ದಾರೆ. ನಮ್ಮ ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದಾರೆ. ನಮ್ಮಲ್ಲಿ ಏನೂ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಸಿಎಂ ಆಗುವ ಅವಕಾಶ ಕೈತಪ್ಪಿದ್ದಕ್ಕೆ ಬೇಸರ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಎಸ್.ಎಮ್ ಕೃಷ್ಣ ಹಾಗೆ ಮಾಡಿದ್ದರು ಎಂದು ಹೇಳಿದ್ದಲ್ಲದೇ, ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದೆ. ಈಗ ಮುಖ್ಯಮಂತ್ರಿ ಆಯ್ಕೆ ಮಾಡುವ ಹುದ್ದೆಯಲ್ಲಿದ್ದಾರೆ. ನಾವೆಲ್ಲ ಪಕ್ಷದ ಶಿಸ್ತಿನ ಸಿಪಾಯಿಗಳು, ಹೈಕಮಾಂಡ್ ತಿರ್ಮಾನ ಮಾಡಬೇಕು. ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ಡಿ. ಕೆ ಶಿವಕುಮಾರ್, ಪರಮೇಶ್ವರ್ ಕೂಡ ಅದನ್ನೇ ಹೇಳಿರುವುದಾಗಿ ಅವರು ಹೇಳಿದ್ದಾರೆ.