ಬಾಗಲಕೋಟೆ: ರಾಜ್ಯಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿ 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ.
33,209 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ಪರೀಕ್ಷೆಯ ಮೊದಲ ದಿನವಾಗಿದ್ದರಿಂದಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ ಮಳೆ ಸುರಿಸಿ ಸ್ವಾಗತಿಸಿದ್ದಾರೆ. ಅಮೀನಗಡ ಪಟ್ಟಣದಲ್ಲಿನ ಸಂಗಮೇಶ್ವರ ಪಿಯು ಕಾಲೇಜಿನಲ್ಲಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಹೂ ಮಳೆ ಸುರಿಸಿ ಸ್ವಾಗತಿಸಲಾಗಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಶುಭ ಕೋರಲಾಯಿತು. ಆತ್ಮವಿಶ್ವಾಸದಿಂದ ಯಾವುದೇ ಭಯ ಇಲ್ಲದೆ ಪರೀಕ್ಷೆ ಎದುರಿಸುವಂತೆ ತಿಳುವಳಿಕೆ ಮೂಡಿಸಲಾಯಿತು.